ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ (New Year Celebration ) ಕ್ಷಣಗಣೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ (Bengaluru City) ಬಿಗಿಬಂದೋಬಸ್ತ್ ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ (Bengaluru Police Commissioner) ನಗರದ ಡಿಸಿಪಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಇಂದು ಸಂಜೆಯಿಂದಲೇ ಹೊಸ ವರ್ಷದ ಸಂಭ್ರಮಾಚರಣೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಎಂಜಿ ರೋಡ್ (MG Road), ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ (Koramangala ) ಹಾಗೂ ಇಂದಿರಾನಗರಗಳಿಗೆ ಕಮಿಷನರ್ ಭೇಟಿ ನೀಡ ಭದ್ರತೆ ಪರಿಶೀಲನೆ ನಡೆಸಿದರು. ಸಿಸಿ ಕ್ಯಾಮೆರಾ, ಬ್ಯಾರಿಗೇಟ್, ವಾಚ್ ಟವರ್ ಸೇರಿ ಇತರೇ ಭದ್ರತೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಅಧಿಕಾರಿಗಳು ಯಾವ ಯಾವ ರಸ್ತೆಗಳನ್ನು ಬ್ಲಾಕ್ ಮಾಡಲಾಗುತ್ತೆ ಅನ್ನೋ ಕುರಿತಾಗಿ ಕಮಿಷನರ್ ಅವರಿಗೆ ಮಾಹಿತಿ ಹಂಚಿಕೊಂಡರು. ಹೊಸ ವರ್ಷ ಸಂಭ್ರಮಾಚರಣೆ ಹಿನ್ನಲೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಸೇರುವ ರಸ್ತೆಗಳ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ.
ಇದನ್ನೂ ಓದಿ:
Dharwad: ಬಡ್ಡಿ ಹಣದ ಆಸೆಗೆ ಬಿದ್ದು ಹೆಣವಾದ ನಿವೃತ್ತ ಶಿಕ್ಷಕಿ; ಸಾಲ ಕೊಟ್ಟ ಹಣ ವಾಪಸ್ ಕೇಳಿದ್ದೆ ತಪ್ಪಾಯ್ತು!
ಬೋಲ್ಡ್ ಫೋಟೋಸ್ ಶೇರ್ ಮಾಡಿದ ನಟಿ ಅಮೂಲ್ಯ!
ವಾಹನಗಳ ಸಂಚಾರ ಮಾರ್ಪಾಡು
ನಗರದ ಎಂ.ಜಿ.ರಸ್ತೆ, ಬ್ರಿಗೇಡ್‌ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಚರ್ಚ್ ಸ್ಟ್ರೀಟ್‌ನಲ್ಲಿ ಹೊಸವರ್ಷ ಆಚರಣೆ ಜೋರಾಗಿರೋದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ವಾಹನಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶ ನಿಷೇಧ ವಿಧಿಸಲಾಗಿದೆ.
- ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
- ಬ್ರಿಗೇಡ್ ರಸ್ತೆಯಲ್ಲಿ, ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್‌ವರೆಗೆ
- ಚರ್ಚ್ ಸ್ಟ್ರೀಟ್ರಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
- ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ
- ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್ ನಿಂದ ಎಂ.ಜಿ ರಸ್ತೆ ಜಂಕ್ಷನ್ ವರೆಗೆ (ಶಂಕರ್ ನಾಗ್ ಚಿತ್ರಮಂದಿರ)
- ರೆಸಿಡೆನ್ಸಿ ರಸ್ತೆಯ ಆಶಿರ್ವಾದಂ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ ಡಿಸೆಂಬರ್ 31 ರಂದು ರಾತ್ರಿ 8-00 ಗಂಟೆ ಬಳಿಕ ಸಂಚಾರ ವ್ಯವಸ್ಥೆ ಮಾರ್ಪಾಡು ಆಗಲಿದೆ.
- ಎಂ.ಜಿ ರಸ್ತೆಯಲ್ಲಿ, ಕ್ಲೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಇನ್ನು ಮುಂದಕ್ಕೆ ಹೋಗುವಂತಹ ಚಾಲಕರು, ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ ಜಂಕ್ಷನ್-ಬಲ ತಿರುವು ಕಬ್ಬನ್‌ರಸ್ತೆ ಮೂಲಕ ಸಂಚರಿಸಿ ವೆಬ್‌ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.
- ಹಲಸೂರು ಕಡೆಯಿಂದ ಕಂಟೊನ್ವೆಂಟ್ ಕಡೆಗೆ ಹೋಗುವಂತಹ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ-ಡಿಕೆನ್ಸನದ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್‌ರಸ್ತೆ ಸೇರಿ ಮುಂದೆ ಸಾಗುವುದು.
- ಹಲಸೂರು ಕಡೆಯಿಂದ ಮೆಜಸ್ಟಿಕ್ ಕಡೆಗೆ ಹೋಗುವಂತಯ ವಾಹನಗಳು ಮೆಯೋಹಾಲ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಗರುಡ ಮಾಲ್ ಜಂಕ್ಷನ್, ಡಿಸೋಜಾ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ರಿಚ್ಮಂಡ್ ರಸ್ತೆಯ ಮೂಲಕ ಸಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ