Download Our App

Follow us

Home » Uncategorized » Pratap Simha Brother Arrest: ಟೈಮ್ ಬರಲಿ, ಯಾರ ಕೈವಾಡ ಅನ್ನೋದನ್ನ ಹೇಳ್ತೀನಿ; ವಿಕ್ರಮ್ ಸಿಂಹ ಆಕ್ರೋಶ

Pratap Simha Brother Arrest: ಟೈಮ್ ಬರಲಿ, ಯಾರ ಕೈವಾಡ ಅನ್ನೋದನ್ನ ಹೇಳ್ತೀನಿ; ವಿಕ್ರಮ್ ಸಿಂಹ ಆಕ್ರೋಶ

ಹಾಸನ: ಅರಣ್ಯ ಪ್ರದೇಶದಲ್ಲಿ ಮರ ಕಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸಂಸದ ಪ್ರತಾಪ್ ಸಿಂಹ (MP Pratap Simha) ಸೋದರ ವಿಕ್ರಮ್ ಸಿಂಹ (Vikram Simha) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಆರೋಗ್ಯ ತಪಾಸಣೆಗಾಗಿ (Medical Checkup) ಹಾಸನದ ಹಿಮ್ಸ್ ಆಸ್ಪತ್ರೆಗೆ ವಿಕ್ರಮ್ ಸಿಂಹರನ್ನ ಕರೆದುಕೊಂಡು ಬರಲಾಗಿತ್ತು. ಆಸ್ಪತ್ರೆಗೆ ಒಳಗೆ ಹೋಗುತ್ತಿರುವ ಸಂದರ್ಭದಲ್ಲಿ ತುಂಬಾ ವಿಷಯಗಿಳಿವೆ ಕಾಲ ಬರಲಿ ಎಲ್ಲಾ ಹೇಳ್ತೇನೆ. ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ ಎಂದು ಆಕ್ರೋಶ ಹೊರ ಹಾಕಿದರು. ಯಾರ ಕೈವಾಡ ಇದೆ ಎಲ್ಲವನ್ನೂ ಹೇಳುತ್ತೇನೆ. ಯಾರನ್ನ ನೀವು ನಿಷ್ಟಾವಂತ ಅಧಿಕಾರಿ ಎನ್ನುತ್ತಿದ್ದೀರಿ. ಅವರ ನಿಷ್ಟೆ ಯಾರಿಗೆ ಅನ್ನೋದನ್ನೂ ಹೇಳುತ್ತೇನೆ ಎಂದು ಪರೋಕ್ಷವಾಗಿ ಬೇಲೂರು ತಹಶೀಲ್ದಾರ್ ಮಮತಾ ವಿರುದ್ಧ ವಾಗ್ದಾಳಿ ನಡೆಸಿದರು,

ಜಾಹೀರಾತು

ನಮ್ಮನ್ನ ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಅಣ್ಣನನ್ನ ಟಾರ್ಗೆಟ್ ಮಾಡಲಾಗಿದ್ದು, ಇದೆಲ್ಲಾ ವ್ಯವಸ್ಥಿತವಾಗಿ ನಡೆಯುತ್ತಿರೋ ಪಿತೂರಿ ಎಂದು ಆಕ್ರೋಶ ಹೊರ ಹಾಕಿದರು.

ವೈದ್ಯಕೀಯ ಪರೀಕ್ಷೆ ವೇಳೆ ವಿಕ್ರಮ್ ಸಿಂಹ ಅಧಿಕ ರಕ್ತದೊತ್ತಡದ ಸಮಸ್ಯೆ ಇರೋದು ದೃಢವಾಗಿದೆ. ವೈದ್ಯರು ವಿಶ್ರಾಂತಿಗೆ ಸೂಚನೆ ನೀಡಿದ್ದಾರೆ. ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿಕ್ರಮ್ ಸಿಂಹ ವಿಶ್ರಾಂತಿಯಲ್ಲಿದ್ದು, ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

126 ಮರಗಳ ಮಾರಣಹೋಮದ ಆರೋಪ

ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ಕಾರಿ ಜಮೀನಿನಲ್ಲಿದ್ದ 126 ಮರಗಳನ್ನು ಅಕ್ರಮವಾಗಿ ಕಡಿದ ಆರೋಪ ವಿಕ್ರಂ ಮೇಲಿತ್ತು.

ಬೇಲೂರು ತಹಶೀಲ್ದಾರ್ ಮಮತಾ ಅವರ ವರದಿ ಮೇರೆಗೆ ಡಿ.16ರಂದು ಅರಣ್ಯ ಇಲಾಖೆಗೆ ಮರ ಕಡಿದ ವಿಷಯ ಗೊತ್ತಾಗಿತ್ತು.  ವಿಕ್ರಮ್ ಸಿಂಹ  ಆರಂಭದಲ್ಲಿ ತನಿಖಾ ಅಧಿಕಾರಿ ಮುಂದೆ ಹೇಳಿಕೆಗೆ ಹಾಜರಾಗಿದ್ದರು ಆದರೆ ಹೆಚ್ಚಿನ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು.

ಜಾಹೀರಾತು
ಫ್ರಿಜ್​​​ನಲ್ಲಿ ಬಿಯರ್​ ಹೆಪ್ಪುಗಟ್ಟಲ್ಲ ಯಾಕೆ!


ಫ್ರಿಜ್​​​ನಲ್ಲಿ ಬಿಯರ್​ ಹೆಪ್ಪುಗಟ್ಟಲ್ಲ ಯಾಕೆ!

ಇದನ್ನೂ ಓದಿ:
Pratap Simha: ನಾನು ಜಗ್ಗೋ ಮಗನೇ ಅಲ್ಲ; ಸೋದರನ ಬಂಧನಕ್ಕೆ ಪ್ರತಾಪ್ ಸಿಂಹ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ವಶಕ್ಕೆ

ವಿಕ್ರಮ್ ಸಿಂಹ ಅವರಿಗಾಗಿ ಅರಣ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಬೆಂಗಳೂರಿನಲ್ಲಿ ಇರುವ ಮಾಹಿತಿ ಪಡೆದ ಅಧಿಕಾರಿಗಳು, ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲೇ ಇರುವ ಜಾರುಬಂಡೆ ಕಾವಲ್‌ನಲ್ಲಿರುವ ಅರಣ್ಯ ಕೇಂದ್ರದಲ್ಲಿ ವಿಚಾರಣೆಗಾಗಿ ಕರೆದೊಯ್ಯಲಾಗಿತ್ತು. ಆನಂತರ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

Source link

BTV Kannada
Author: BTV Kannada

Leave a Comment

RELATED LATEST NEWS

Top Headlines

Live Cricket