ಬೆಂಗಳೂರು : ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಗ್ ಶಾಕ್ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್ಗಳ ಶುಲ್ಕ ಶೇ10% ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.
ಆದರೆ ಶುಲ್ಕ ಏರಿಕೆಗೆ ಅವಕಾಶ ನೀಡಿ ಬಡ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ. ರಾಜ್ಯ ಸರ್ಕಾರ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ10% ರಷ್ಟು ಶುಲ್ಕ ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಪಿಯುಸಿ ಮುಗಿಸಿ ಉನ್ನತ್ತ ಶಿಕ್ಷಣ ಪಡೆಯುವ ಕನಸ್ಸು ಹೊತ್ತು ಪದವಿಗೆ ಬರುವ ವಿದ್ಯಾರ್ಥಿಗಳಿಗೆ ಈಗ ಆರ್ಥಿಕ ಹೊರೆ ಬೀಳಲಿದೆ. ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ 10ರಷ್ಟು ಏರಿಕೆಗೆ ಅವಕಾಶ ನೀಡಿದೆ.
ಈಗಾಗಲೇ ಈ ಪರಿಷ್ಕೃತ ಶುಲ್ಕ ಪಟ್ಟಿಯನ್ನ ಯೂನಿವರ್ಸಿಟಿಗಳಿಗೆ ನೀಡಿ ಈ ಬಗ್ಗೆ ಸಿದ್ಧತೆಗೆ ಸರ್ಕಾರ ಸೂಚನೆ ನೀಡಿದೆ. ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ10% ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ್ತ ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
ಮುಂದಿನ ವರ್ಷ ಪದವಿ ವಿದ್ಯಾರ್ಥಿಗಳಿಗೆ ಮತಷ್ಟು ಶುಲ್ಕ ಏರಿಕೆಯ ಬರೆ ಬೀಳಲಿದೆ.
ಏಕರೂಪ ಶುಲ್ಕ ಸಮಿತಿ 2022/23 ರ ಅನ್ವಯ ಶುಲ್ಕ ಏರಿಕೆ ಮಾಡಲಾಗಿದೆ. BA – 11700 rs, BA specilization – 16200, BSW – 16400, B.Com – 19700.
B.Com Specilization – 24700, BBA – 28700, BBA – Specilization – 31700, B.Sc – 21790, B.Sc Specilization – 25700, BCA -30700. B.Ed – 12750, BO.Ed – 42750, BA LLB – 27750, MA – 15250, MVA – 17250, MSW – 21250.
MA ( MCJ ) – 21750, MA ( Foreign Lang ) – 23250, M.Com -19750, M.Com Specilization -64750, MTTM – 67750, MBA ( D )59750, MBA ( E )79750. Non-kar – NRI – BA – 12000, BS Specilization – 12000, BSW 12000
ಇದನ್ನೂ ಓದಿ : ಬಸ್-ಟ್ರಕ್ ನಡುವೆ ಭೀಕರ ಅಪಘಾತ.. 12 ಮಂದಿ ಸಾ*ವು..!