Download Our App

Follow us

Home » ಕ್ರೀಡೆ » ಭಾರತ ಮತ್ತು ಸೌತ್ ಆಫ್ರಿಕಾ 2ನೇ ಟೆಸ್ಟ್ ಪಂದ್ಯ – ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ..!

ಭಾರತ ಮತ್ತು ಸೌತ್ ಆಫ್ರಿಕಾ 2ನೇ ಟೆಸ್ಟ್ ಪಂದ್ಯ – ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ..!

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಕೇಪ್ ಟೌನ್’ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಗಾಯಗೊಂಡಿರುವ ಶಾರ್ದೂಲ್ ಠಾಕೂರ್ ಬದಲಿಗೆ ಯುವ ವೇಗಿ ಮುಕೇಶ್ ಕುಮಾರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಮಾಡು ಇಲ್ಲವೇ ಮಡಿ ಪಂದ್ಯ : ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿದೆ. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಸೌತ್ ಆಫ್ರಿಕಾ ತಂಡ ಇನಿಂಗ್ಸ್​ ಹಾಗೂ 32 ರನ್​ಗಳಿಂದ ಗೆದ್ದುಕೊಂಡಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯನ್ನು ಡ್ರಾ ನಲ್ಲಿ ಅಂತ್ಯಗೊಳಿಸಬೇಕಿದ್ದರೆ 2ನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಲೇಬೇಕು.

ಅತ್ತ ಸೌತ್ ಆಫ್ರಿಕಾ ತಂಡವು 2ನೇ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸರಣಿ 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎಂದರೆ ತಪ್ಪಾಗಲಾರದು. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11 : ಡೀನ್ ಎಲ್ಗರ್ (ನಾಯಕ) , ಐಡೆನ್ ಮಾರ್ಕ್ರಾಮ್ , ಟೋನಿ ಡಿ ಝೋರ್ಜಿ , ಟ್ರಿಸ್ಟಾನ್ ಸ್ಟಬ್ಸ್ , ಡೇವಿಡ್ ಬೆಡಿಂಗ್ಹ್ಯಾಮ್ , ಕೈಲ್ ವೆರ್ರೆನ್ನೆ , ಮಾರ್ಕೊ ಯಾನ್ಸೆನ್ , ಕೇಶವ್ ಮಹಾರಾಜ್ , ಕಗಿಸೊ ರಬಾಡಾ , ನಂದ್ರೆ ಬರ್ಗರ್ , ಲುಂಗಿ ಎನ್ಗಿಡಿ.

ಭಾರತ ಪ್ಲೇಯಿಂಗ್ 11 :  ರೋಹಿತ್ ಶರ್ಮಾ (ನಾಯಕ),ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ,ಶ್ರೇಯಸ್ ಅಯ್ಯರ್,ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ,ಮುಕೇಶ್ ಕುಮಾರ್,ಜಸ್​ಪ್ರೀತ್ ಬುಮ್ರಾ,,ಮೊಹಮ್ಮದ್ ಸಿರಾಜ್,.ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ : ಶ್ರೀಕಾಂತ್ ಪೂಜಾರಿ ರಿಲೀಸ್ ಮಾಡಲು ರಾಜ್ಯ ಸರ್ಕಾರಕ್ಕೆ 48 ಗಂಟೆ ಗಡುವು ಕೊಟ್ಟ ಬಿ.ವೈ.ವಿಜಯೇಂದ್ರ..!

 

Btv Kannada1
Author: Btv Kannada1

Leave a Comment

RELATED LATEST NEWS