ಬೆಂಗಳೂರು: ಕೆ-ಸೆಟ್ ಪರೀಕ್ಷೆಯು ಜ.13ರಂದು ನಡೆಯುತ್ತಿದ್ದು, ವಸ್ತ್ರ ಸಂಹಿತೆ ಕಡ್ಡಾಯವಾಗಿದೆ. ಮಾಂಗಲ್ಯ ಸರ, ಕಾಲುಂಗುರಕ್ಕೆ ಅನುಮತಿ ನೀಡಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರಕಾರದಿಂದ ಮಾನ್ಯವಾಗಿರುವ ನಿಗಧಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ.
ಜತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಮತ್ತು ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದಿದ್ದಾರೆ.
ಪರೀಕ್ಷೆಯು ಆ ದಿನ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ.
ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಕಡ್ಡಾಯವಾಗಿದೆ. ಇದರ ಭಾಗವಾಗಿ ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ.
ಅದರ ಜೊತೆಗೆ, ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು
ಬರಬಾರದು ಎಂದು ಮಾಹಿತಿ ನೀಡಿದ್ದಾರೆ.
ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂಗಳನ್ನು ಧರಿಸಿಕೊಂಡು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಜೊತೆಗೆ, ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ರಮ್ಯಾ ತಿಳಿಸಿದ್ದಾರೆ.
ಇದನ್ನೂ ಓದಿ :ಮಂಗಳೂರಿನ ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡ..!