ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ಬಹಳ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿದೆ.
ಧ್ರುವ ಸರ್ಜಾ ನಟನೆಯ ಹೈ ವೋಲ್ಟೇಜ್ ಸಿನಿಮಾ ಇದಾಗಿದ್ದು, 2024ರ ಬಹುನಿರೀಕ್ಷಿತ ಚಿತ್ರವೂ ಹೌದು. ಟೀಸರ್ನಿಂದಲೇ ದಕ್ಷಿಣ ಭಾರತದಲ್ಲಿ ಸಖತ್ ಕ್ರೇಜ್ ಕ್ರಿಯೇಟ್ ಮಾಡಿರುವ ಸಿನಿಮಾವಿದು.
ಈ ನಡುವೆ ಧ್ರುವ ಸರ್ಜಾ ಅಭಿಮಾನಿಗಳು ಚಿತ್ರದ ಎಲ್ಲಾ ಅಪ್ಡೇಟ್ ಗಳಿಗಾಗಿ ಎದುರು ನೋಡುತ್ತಿದ್ದಾರೆ. ಹೀಗಿರುವಾಗ ಮಾರ್ಟಿನ್ ಚಿತ್ರತಂಡದಿಂದ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ಅದೇನೆಂದರೆ ಮಾರ್ಟಿನ್ ಚಿತ್ರದ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಸೇಲ್ ಆಗಿದೆ.
ಹೌದು.. ಮಾರ್ಟಿನ್ ಚಿತ್ರ ಕರ್ನಾಟಕ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದು, ಆಡಿಯೋ ರೈಟ್ಸ್ ಲಹರಿ ಸಂಸ್ಥೆಯಿಂದ ಸರಿಗಮಪ ಕಂಪನಿ ತೆಕ್ಕೆಗೆ ಪಡೆದಿದೆ.
ಬರೋಬ್ಬರಿ 10 ಕೋಟಿಗೆ ಮಾರ್ಟಿನ್ ಚಿತ್ರದ ಆಡಿಯೋ ಸೇಲ್ ಆಗಿದ್ದು, ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆದ ಆಡಿಯೋ ರೈಟ್ಸ್ ಎಂಬ ಹೆಗ್ಗಳಿಕೆ ಮಾರ್ಟಿನ್ ಚಿತ್ರಕ್ಕೆ ದೊರೆತಿದೆ. ಈ ಬಗ್ಗೆ ಮಾರ್ಟಿನ್ ಚಿತ್ರತಂಡ ಬಿಟಿವಿಗೆ ಮಾಹಿತಿ ನೀಡಿದೆ.
ಧ್ರುವ ಸರ್ಜಾ ಮಾಸ್ ಲುಕ್ನಲ್ಲಿ ಕಾಣಿಸಿಕೊಳ್ಳಲಿರುವ ‘ಮಾರ್ಟಿನ್’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದ್ದು, ಸದ್ಯ ಎಲ್ಲೆಡೆ ಸಖತ್ ಸೌಂಡ್ ಮಾಡುತ್ತಿದೆ.
ಈ ಹೈವೋಲ್ಟೇಜ್ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರಕ್ಕೆ ನಿರ್ದೇಶಕ ಎ.ಪಿ.ಅರ್ಜುನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಮಾರ್ಟಿನ್’ ಔಟ್ ಅಂಡ್ ಔಟ್ ಸಾಹಸಮಯ ಸಿನಿಮಾವಾಗಿದ್ದು, ಚಿತ್ರದಲ್ಲಿ ದೇಶ ಪ್ರೇಮ, ಒಂದು ಮುದ್ದಾದ ಲವ್ ಸ್ಟೋರಿ ಜೊತೆಗೆ ಫ್ಯಾಮಿಲಿ ಸ್ಟೋರಿಯೂ ಇರಲಿದೆ. ಸದ್ಯ ರಿವೀಲ್ ಆಗಿರುವ ಟೀಸರ್ನಲ್ಲಿ ಧ್ರುವ ಸರ್ಜಾ ದೇಶ ಕಾಯುವ ರಕ್ಷಕ ಅನ್ನೋದು ಗೊತ್ತಾಗುತ್ತದೆ.
ಚಿತ್ರದಲ್ಲಿ ಧ್ರುವ ಸರ್ಜಾ ಜೋಡಿಯಾಗಿ ವೈಭವಿ ಶಾಂಡಿಲ್ಯ ನಟಿಸಿದ್ದು, ಅನ್ವೇಶಿ ಜೈನ್, ನಿಕಿತೀನ್ ಧೀರ್ ಸೇರಿದಂತೆ ದೊಡ್ಡ ತಾರಾ ಬಳಗವಿದೆ. ಬೆಂಗಳೂರು, ಕಾಶ್ಮೀರದ ಸುಂದರ ತಾಣಗಳಲ್ಲಿ ಮಾರ್ಟಿನ್ ಚಿತ್ರೀಕರಣವಾಗಿದೆ. ಮಾರ್ಟಿನ್ ಕ್ಲೈಮ್ಯಾಕ್ಸ್ ಸನ್ನಿವೇಶಗಳನ್ನು ಸಾಹಸ ನಿರ್ದೇಶಕರಾದ ರವಿವರ್ಮ ಹಾಗೂ ರಾಮ್ ಲಕ್ಷ್ಮಣ್ ಕಂಪೋಸ್ ಮಾಡಿದ್ದಾರೆ. ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಛಾಯಾಗ್ರಹಣ, ಮಹೇಶ್‌ರೆಡ್ಡಿ ಅವರ ಸಂಕಲನವಿದೆ.
ನಿರ್ಮಾಪಕ ಉದಯ್ ಕೆ ಮೆಹ್ತಾ ಬಹು ಕೋಟಿ ವೆಚ್ಚದಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನವೇ ಇಷ್ಟು ದೊಡ್ಡ ಮೊತ್ತಕ್ಕೆ ಆಡಿಯೋ ಮಾರಾಟ ಆಗಿರೋದು ಚಿತ್ರತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಮತ್ತು ಅಭಿಮಾನಿಗಳಲ್ಲೂ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಮೆಟ್ರೋ ಹಳಿಗೆ ಹಾರಿ ಯುವಕ ಆ*ತ್ಮಹತ್ಯೆಗೆ ಯತ್ನ..